ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 6 ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕಾರ್ಯಕ್ರಮಕ್ಕಾಗಿ ಈಗಾಗಲೇ ಮೊದಲ ಪ್ರೋಮೋ ಶೂಟ್ ಮುಗಿಸಿದ್ದಾರೆ.
ಈ ಬಾರಿ ಬಿಗ್ ಬಾಸ್ ಶೋನಲ್ಲಿ ಭಾಗವಹಿಸುವ 6 ಸ್ಪರ್ಧಿಗಳ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೊದಲನೆಯದಾಗಿ ಆರ್. ಜೆ ರಶ್ಮಿ, ಚಂದನ್ ಶೆಟ್ಟಿಯ ಟಕೀಲಾ ಹಾಡಿನಲ್ಲಿ ಸೊಂಟ ಬಳುಕಿಸಿರುವ ಶಾಲಿನಿ, ಸ್ಯಾಂಡಲ್ ವುಡ್ ನಟಿ ಭಾವನ ಮತ್ತು ಸುಮನ್ ರಂಗನಾಥ್ ಕೂಡ ಈ ಬಾರಿ ಬಿಗ್ ಬಾಸ್ ಮನೆಗೆ ಕಾಲಿಡಲಿದ್ದಾರೆ ಎನ್ನಲಾಗಿದೆ.
ಶುಭಪೂಂಜಾ, ನಟ ಟೆನ್ನಿಸ್ ಕೃಷ್ಣ, ಪುಟ್ಟಗೌರಿ ಖ್ಯಾತಿಯ ಶಿವರಂಜಿನಿ, ನಟ ಅನಿರುದ್, ಮುಂಗಾರು ಮಳೆ ನೇಹಾಶೆಟ್ಟಿ, ರವಿಶಂಕರ್, ಸರಿಗಮಪ ಚೆನ್ನಪ್ಪ, ನಟ ಅಚ್ಯುತ್ ಕುಮಾರ್, ನಟಿ ಮಯೂರಿ, ತಿಥಿ ಖ್ಯಾತಿಯ ಅಭಿ, ಡಾ. ಶಂಕರೇಗೌಡ ಇವರೆಲ್ಲರ ಹೆಸರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Comments
Post a Comment