ಸ್ಪೋಟಕ ಸುದ್ದಿ: ಪಾಕ್ ಮಾತುಕತೆ ಬೇಡಿಕೆ ತಿರಸ್ಕರಿಸಿ, ಕಪಾಳಕ್ಕೆ ಬಾರಿಸಿದ ಭಾರತ...!!!!

ಸೌಹಾರ್ದ ಮಾತುಕತೆ ನಡೆಸಲು ಪಾಕಿಸ್ತಾನ ಇಟ್ಟಿದ್ದ ಬೇಡಿಕೆಯನ್ನು ಭಾರತ ತಿರಸ್ಕರಿಸಿದೆ. ಪಾಕಿಸ್ತಾನದ ಹೊಸ ಸರ್ಕಾರ ಮಾತುಕತೆಯ ಬೇಡಿಕೆಯನ್ನು ಮುಂದಿಟ್ಟಿತ್ತು. ಆದರೆ, ಗಡಿಯಲ್ಲಿ ಉಗ್ರರ ಚಟುವಟಿಕೆಗೆ ಕಡಿವಾಣ ಹಾಕಲು ಸರ್ಕಾರ ವಿಫಲವಾಗಿತ್ತು. ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಭಾರತ ಸ್ಪಷ್ಟಪಡಿದೆ. ಸೆಪ್ಟೆಂಬರ್ ಅಂತ್ಯದಲ್ಲಿ ನ್ಯೂಯಾರ್ಕ್‌ನಲ್ಲಿ ಭಾರತದ ಜೊತೆ ಪಾಕಿಸ್ತಾನ ಮಾತುಕತೆ ನಡೆಸಲು ಬೇಡಿಕೆ ಇಟ್ಟಿತ್ತು.

ವಿಶ್ವಸಂಸ್ಥೆ ಸಾಮಾನ್ಯ ಸಭೆ ವೇಳೆ ಭಾರತ-ಪಾಕ್ ಮಾತುಕತೆ:

ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಡೆಯಲಿದೆ. ಈ ಸಭೆಯ ವೇಳೆ ಉಭಯ ದೇಶಗಳ ನಡುವೆ ಮಾತುಕತೆ ನಡೆಸಬಹುದು ಎಂದು ಪಾಕಿಸ್ತಾನ ಆಹ್ವಾನ ನೀಡಿತ್ತು. ಆದರೆ, ಭಾರತ ಈ ಆಹ್ವಾನವನ್ನು ತಳ್ಳಿಹಾಕಿದೆ.
ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ದೇಶದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಪ್ರಧಾನಿಗೆ ಅಭಿನಂದನೆ ಸಲ್ಲಿಸಿ ಭಾರತದ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದರು.

ಈ ಪತ್ರಕ್ಕೆ ಧನ್ಯವಾದಗಳನ್ನು ತಿಳಿಸಿದ್ದ ಪಾಕಿಸ್ತಾನ ಪ್ರತ್ಯುತ್ತರ ಬರೆಯುವಾಗ ಶಾಂತಿ ಮಾತುಕತೆಯ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಭಾರತದ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಪಾಕ್‌ ಸಚಿವ ಶಾ ಮೆಹಮೂದ್ ಖುರೇಶಿ ನಡುವೆ ಮಾತುತಕೆ ನಡೆಯಲಿ ಎಂದು ಪಾಕಿಸ್ತಾನ ಹೇಳಿತ್ತು.

Comments