ಬೆಂಗಳೂರು, ಸೆಪ್ಟೆಂಬರ್ 19: "ಎದುರಾಳಿ ಇಲ್ಲದೆ ಚೆಸ್ ಆಡೊದು ಹೇಗೆ ಡಿಕೆ ಶಿವಕುಮಾರ್ ಅವರೇ? ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬೇಡಿ" ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಸೆ.19) ನಡೆಯುತ್ತಿರುವ ಬಿಜೆಪಿ ವಿಶೇಷ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಇತ್ತೀಚೆಗಷ್ಟೇ ಡಿಕೆ ಶಿವಕುಮಾರ್ ಅವರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಅವರ ಹೇಳಿಕೆಗೆ ಇಂದು ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, 'ಎದುರಾಳಿಯೇ ಇಲ್ಲದೆ ಚೆಸ್ ಆಡುವುದಕ್ಕೆ ಬರುತ್ತದೆಯೇ? ಏನಾದರೂ ಹೇಳಿಕೆ ನೀಡುವ ಮೊದಲು ಸ್ವಲ್ಪ ಯೋಚಿಸಿ. ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬೇಡಿ' ಎಂದರು.
ಸೆಪ್ಟೆಂಬರ್ 19ರಂದು ಬಿಜೆಪಿ ಶಾಸಕಾಂಗ ಸಭೆ, ಮಹತ್ವದ ಚರ್ಚೆ
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿ ವಿಶೇಷ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಬಹುತೇಕ ಶಾಸಕರು, ಸಂಸದರು ಭಾಗವಹಿಸಿದ್ದಾರೆ.

Comments
Post a Comment