ಸಚಿವ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಬಂಧನವಾಗಲಿದ್ದಾರೆ, ಎನ್ನುವ ವದಂತಿಯೊಂದು ಇಂದು ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣದಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿದೆ.
ಈ ನಡುವೆ ಡಿ.ಕೆ ಸೋದರು ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಈ ನಡೆ ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇಂದು ಡಿಕೆ ಸಹೋದರರು ಕರೆದಿರುವ ಸುದ್ದಿಗೋಷ್ಠಿ ಯಾವೆಲ್ಲ ಘಟನೆಗಳ ಬಗ್ಗೆ ಅವರು ಮಾಹಿತಿ ನೀಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಐಟಿ ದಾಳಿಗೆ ಸಂಬಂಧಿಸಿದಂತೆ ಸಚಿವ ಡಿ.ಕೆ ಶಿವಕುಮಾರ್ ಮತ್ತು ಸಂಸದ ಡಿ.ಕೆ ಸುರೇಶ್ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲು ಜಾರಿ ನಿರ್ದೇಶನಾಲಯ ರಾಜ್ಯಪಾಲರ ಬಳಿ ಅನುಮತಿ ಕೋರಿದೆ ಎನ್ನಲಾಗಿದೆ. ರಾಜ್ಯಪಾಲರು ಅನುಮತಿ ನೀಡಿದ್ದೇ ಆದಲ್ಲಿ ಡಿಕೆಶಿ ಸೋದರರ ಬಂಧನ ನಿಶ್ಚಿತ. ಈ ಹಿನ್ನೆಲೆಯಲ್ಲಿ ಡಿ.ಕೆ ಸೋದರು ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನಲಾಗಿದೆ.

Comments
Post a Comment